ಸಾಗರ : ತಾಲ್ಲೂಕಿನ ಇಡುವಾಣಿ ಸಮೀಪ ಸರ್ಕಾರಿ ಬಸ್ ಮತ್ತು ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿ ಕೆಲವರಿಗೆ ಸಣ್ಣಪುಟ್ಟ ಗಾಯವಾದ ಘಟನೆ ನಡೆದಿದೆ.

ಜೋಗ್ ಕಾರ್ಗಲ್ ಭಾಗದಿಂದ ಸಾಗರದ ಎಲ್.ಬಿ. ಕಾಲೇಜು ಹಾಗೂ ಪ್ರಗತಿ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಶಾಲಾ ವಾಹನ ಹಾಗೂ ಸಾಗರದಿಂದ ಕಾರ್ಗಲ್ ಕಡೆ ಹೋಗುತ್ತಿದ್ದ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಶಾಲಾ ಬಸ್ನಲ್ಲಿ ೩೨ ವಿದ್ಯಾರ್ಥಿಗಳು ಶಿಕ್ಷಕರು ಇದ್ದರು ಎನ್ನಲಾಗಿದೆ. ಈ ಪೈಕಿ ೯ನೇ ತರಗತಿ ವಿದ್ಯಾರ್ಥಿ ಸಾತ್ವಿಕ್, ಶಾಲಾ ಬಸ್ ಚಾಲಕ ಪ್ರವೀಣ್, ಕೆಎಸ್ಆರ್ಟಿಸಿ ಬಸ್ ಚಾಲಕ ಆರೀಫ್ ಎಂಬುವವರಿಗೆ ಹೆಚ್ಚಿನ ಹೊಡೆತ ಬಿದ್ದಿದ್ದು ಶಿವಮೊಗ್ಗ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
ಗಾಯಗೊಂಡವರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆಯಂತೆ ಆಪ್ತ ಕಾರ್ಯದಶಿ ಶ್ರೀನಿವಾಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ ನೆರವಾದರು.