ಶಿವಮೊಗ್ಗ, ಡಿಸೆಂಬರ್ 19: : ಕ್ರಿಸ್ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು

ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ.
ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ

ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.