ಶಿವಮೊಗ್ಗ ವಿನೋಬ ನಗರದಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ಯುವಕನನ್ನು ಅರುಣ್(26) ಎಂದು ಗುರುತಿಸಲಾಗಿದೆ.
ವಿನೋಬ ನಗರದ ಅಪೋಲೋ ಫಾರ್ಮಸಿ ಬಳಿಯಲ್ಲಿ ಕೃತ್ಯ ನಡೆದಿದ್ದು, ಅರುಣ್ ಎಂಬಾತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದ್ದು, ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಶೀಘ್ರವೇ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ಎಸ್’ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.