ಶಿವಮೊಗ್ಗ, ಜನವರಿ 02 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಬ್ಯಾಕೋಡು, ತುಮರಿ, ತಡಗಳಲೆ, ಕಾರ್ಗಲ್, ತಾಳಗುಪ್ಪ, ಇಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್ ಪದವೀಧರ ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

ಖಾಲಿ ಇರುವ ಬ್ಯಾಕೋಡು, ತುಮರಿ, ತಡಗಳಲೆ, ಕಾರ್ಗಲ್, ತಾಳಗುಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆದ್ಯತೆ ಮೇರೆಗೆ ನೇಮಕಾತಿ ಆದೇಶ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಜ.056 ರಂದು ಬೆಳಿಗ್ಗೆ 11:00ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಬಿ.ಹೆಚ್ ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿಧ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವ ಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂ:08182-222382 ಅನ್ನು ಸಂಪರ್ಕಿಸಬಹುದಾಗಿದೆ.