ಶಿವಮೊಗ್ಗ.ಜನವರಿ.07:ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಜ. 11 ರಂದು ನಗರದ ಕೆಲವು ಸ್ಥಳಗಳಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗಿದೆ.

ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ ಹತ್ತಿರ, ರವೀಂದ್ರನಗರ ಗಣಪತಿ ದೇವಸ್ಥಾನದ ಹತ್ತಿರ, ಸೋಮಿನಕೊಪ್ಪ ರಸ್ತೆ ಪೆಟ್ರೋಲ್ ಬಂಕ್ ಹತ್ತಿರ-ದೇವರಾಜ ಅರಸ್ ಬಡಾವಣೆ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ, ಗುಂಡಪ್ಪಶೆಡ್ ಮಾಸ್ತಾಂಬಿಕ ದೇವಸ್ಥಾನದ ಪಾರ್ಕ್ ಹತ್ತಿರ. ಈ ಸ್ಥಳಗಳಲ್ಲಿ ಕೌಂಟರ್ ತೆರೆಯಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು

ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
——————————-