ಶಿವಮೊಗ್ಗ, ಜ.12:
ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿಯಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಜನವರಿ 13ರ ನಾಳೆ ಮಂಗಳವಾರದಿಂದ ಎರಡು ದಿನಗಳ ಕಾಲ ನಡೆಯಲಿದೆ.
ಹಬ್ಬದ ಆಚರಣೆಗೆ ದೇವಾಲಯ ಸಮಿತಿ ಹಾಗೂ ಗ್ರಾಮಸ್ಥರು ಸಕಲ ಸಿದ್ದತೆ ನಡೆಸಿದ್ದು, ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಮಾತೆಯ ಕೃಪೆಗೆ ಪಾತ್ರರಾಗುವಂತೆ ಕೋರಿದ್ದಾರೆ.