SHIMOGA.ಜನವರಿ.13:
ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಜ. 18 ರಂದು ನಗರದ ವಿವಿಧ ಸ್ಥಳಗಳಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗಿದೆ.

ಚಿಕ್ಕಲ್ ಶಿವನ ಪಾರ್ಕ್ ಹತ್ತಿರ, ಗಾಂಧೀನಗರ ಪಾರ್ಕ್ ಹತ್ತಿರ, ವಿನೋಬನಗರ ಕಲ್ಲಹಳ್ಳಿ ಅಭೀಷ್ಟವರ ಗಣಪತಿ ದೇವಸ್ಥಾನದ ಹತ್ತಿರ-ಕೆ.ಹೆಚ್.ಬಿ., ಪರಿಚಯ ಸ್ಟೋರ್ ಎದುರು ಓ.ಟಿ.ರಸ್ತೆ, ಕೃಷಿನಗರ ಗಣಪತಿ ದೇವಸ್ಥಾನದ ಹತ್ತಿರ. ಈ ಸ್ಥಳಗಳಲ್ಲಿ ಕೌಂಟರ್ ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು

ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.