ಶಿವಮೊಗ್ಗ: ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಜ.18 ರಂದು ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ಆಹ್ವಾನಿತ ಪತ್ರಕರ್ತರ ತಂಡಗಳ ಅಂತರಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಬೆಳಗ್ಗೆ 8.30 ಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸುವರು.

ಅತಿಥಿಗಳಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣಗೌಡ, ಸಹ್ಯಾದ್ರಿ ವಾಣಿಜ್ಯ ಕಾಲೇಜು ಪ್ರಾಚಾರ್ಯರಾದ ಪ್ರೊ.ಟಿ.ಅವಿನಾಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ವೈದ್ಯನಾಥ್ ಆಗಮಿಸುವರು. ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹಾಗೂ ಸೂಡಾ ಅಧ್ಯಕ್ಷ

ಹೆಚ್.ಎಸ್.ಸುಂದರೇಶ್ ಅವರು ವಿಜೇತ ತಂಡಗಳಿಗೆ “ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಪ್ʼ ಟ್ರೋಫಿ ಹಾಗೂ ನಗದು ಬಹುಮಾನ ವಿತರಣೆ ಮಾಡುವರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಪತ್ರಕರ್ತರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಲಾಗಿದೆ.