ಶಿವಮೊಗ್ಗ: ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಜನವರಿ 26ರಂದು ಚಿತ್ರಕಲೆ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ.
ಗಣರಾಜ್ಯೋತ್ಸವ ಅಂಗವಾಗಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬಿಎಚ್ ರಸ್ತೆಯಲ್ಲಿರುವ ಜಿಲ್ಲಾ ಸ್ಕೌಟ್ ಭವನದಲ್ಲಿ ಜನವರಿ 26ರಂದು ಬೆಳಗ್ಗೆ 11ಕ್ಕೆ ಚಿತ್ರಕಲೆ ಮತ್ತು ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಚಿತ್ರಕಲೆ ಸ್ಪರ್ಧೆಯಲ್ಲಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನನ್ನ ಮನೆ ವಿಷಯ ಕುರಿತು, ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಆತ್ಮನಿರ್ಭರ ಭಾರತ ವಿಷಯ ಕುರಿತು ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಂದೇ ಮಾತರಂ 150 ವರ್ಷ ವಿಷಯ ಕುರಿತು ಸ್ಪರ್ಧೆ ನಡೆಯಲಿದೆ.
ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಂದೇ ಮಾತರಂ 150 ವರ್ಷ ವಿಷಯ ಕುರಿತು ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯ ನಿಯಮಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9845679549, 8050004779 ಸಂಪರ್ಕಿಸಬಹುದಾಗಿದೆ ಎಂದು ಮಲ್ನಾಡ್ ಓಪನ್ ಗ್ರೂಪ್ ನಾಯಕ ಎ.ವಿ.ರಾಜೇಶ್ ತಿಳಿಸಿದ್ದಾರೆ.