ಶಿವಮೊಗ್ಗ,ಜ.25:
ಪೊಲೀಸ್ ಅಧಿಕಾರಿಗಳು ತಮ್ಮ ಸೇವಾ ಅವಧಿಯಲ್ಲಿ ಸಲ್ಲಿಸಿದ ಅತ್ಯುತ್ತಮ ಶ್ಲಾಘನೀಯ ಸೇವೆಗಾಗಿ, ಪ್ರತಿ ವರುಷ ಪ್ರಶಸ್ತಿ ನೀಡಿ ಗೌರವಿಸುವುದು ವಿಶೇಷವೇ ಹೌದು.

ಪ್ರಸಕ್ತ 2026ನೇ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯ ಟ್ರಯಲ್ ಮಾನಿಟರಿಂಗ್ ಸೆಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಕುಂತಲಾ, ಪೊಲೀಸ್ ಉಪ ನಿರೀಕ್ಷಕರು ಭಾಜನರಾಗಿದ್ದು, ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಗಿರುತ್ತದೆ.

ಶಕುಂತಲಾ ಅವರ ಪತಿ ಮಂಜುನಾಥ್ ಅವರೂ ಪ್ರಸ್ತುತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.