ಶಿವಮೊಗ್ಗ.ಜನವರಿ.30:: ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 01 ರ ಭಾನುವಾರದಂದು ನಗರದ ವಿನೋಬನಗರ ಪೊಲೀಸ್ ಠಾಣೆ, ಪೊಲೀಸ್ ಚೌಕಿ ಹತ್ತಿರ, ಜಯನಗರ ನವೋದಯ ಶಾಲೆ ಹತ್ತಿರ, ಗುರುಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ, ಅಶೋಕನಗರ ನಂದಿನಿ ಬೂತ್ ಹತ್ತಿರ ಹಾಗೂ ಬಾಪೂಜಿನಗರ ಪಾರ್ಕ್ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.