ಶಿವಮೊಗ್ಗ: ದುರಾದೃಷ್ಟವೆಂದರೆ ಹೀಗಿರಬೇಕು. ತೋಟದಲ್ಲಿ ಕೆಲಸ ಮಾಡುತ್ತಿದ್ದ ತಂದೆಯನ್ನು ತಿಂಡಿಗೆ ಕರೆಯಲು ಬಂದ ಮಗನ ತಲೆಯ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದು ಸುಮಾರು ೧೩ ವರ್ಷದ ಬಾಲಕ ಸ್ಥಳದಲ್ಲೇ ಸಾವು ಕಂಡ ಘಟನೆ ಇಂದು ಬೆಳಗ್ಗೆ ಭದ್ರಾವತಿ ತಾಲೂಕು ಅರಹತೋಳಲಿನಲ್ಲಿ ನಡೆದಿದೆ.

ಮಂಜಪ್ಪ ಎಂಬುವವರ ಮಗ ನಿತೀನ್(ಮಹೇಶ್) ಎಂಬ ೮ನೇ ತರಗತಿ ವಿದ್ಯಾರ್ಥಿ ಈ ದುರಂತಕ್ಕೆ ಒಳಗಾದ ದುದೈರ್ವಿ ಕಲ್ಲಿಹಾಳ್‌ನ ಶ್ರೀ ಮಂಜುನಾಥ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಈ ಬಾಲಕ ಓದಿನಲ್ಲಿ ಮುಂದಿದ್ದ. ದುರಾದೃಷ್ಟ ಕೈ ಕೊಟ್ಟಾಗ ವಿದ್ಯುತ್ ತಂತಿಯೇ ಆತನ ಮೇಲೆ ಬಿದ್ದಿದೆ. ಕಾರಣ ತಿಳಿದು ಬಂದಿಲ್ಲ.
ಈ ಸಂದರ್ಭದಲ್ಲಿ ಹೊಳೆಹೊನ್ನೂರು ಪೊಲೀಸರು ಆಗಮಿಸಿದ್ದರು. ಅಲ್ಲಿಗೆ ಬಂದ ಮೆಸ್ಕಾಂನ ಲೈನ್‌ಮ್ಯಾನ್ ಹಾಗೂ ಇಂಜಿನಿಯರ್‌ಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ವಿದ್ಯುತ್ ತಂತಿಗೆ ಬಾಳಿಕೆಯ ಶಕ್ತಿ ಕುಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ಸಮಗ್ರ ಪರಿಶೀಲನೆ ಅಗತ್ಯವಿದೆ.
ಇಂಜಿನಿಯರ್‌ಗಳ ಕರ್ತವ್ಯ ಇಲ್ಲಿ ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ಬಾಲಕ ಅಸಹಜ ಸಾವಿಗೆ ಇಡೀ ಗ್ರಾಮ ಕಂಬನಿ ಮಿಡಿದಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

  • ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
    ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
    ” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
    ” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
  • ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
    ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
  • ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
  • ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
    *ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
    *ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
  • ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.

By admin

ನಿಮ್ಮದೊಂದು ಉತ್ತರ

You missed

error: Content is protected !!