ಶಿವಮೊಗ್ಗ,ಫೆ.14
ನಗರದ ಗಾಡಿಕೊಪ್ಪದ ರಾಜಮಹಲ್ ಬಡಾವಣೆಯ ಲಗನ ಮಂದಿರದ ಆವರಣದಲ್ಲಿನ ಶ್ರೀ ಮಂಜುನಾಥೇಶ್ವರ ಪರಿವಾರ ದೇವತೆಗಳ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಫೆ. 15 ರ ಭಾನುವಾರ ಬೆಳಗ್ಗೆ 6 ಗಂಟೆಯಿಂದ ರುದ್ರಾಭಿಷೇಕ, ಶ್ರೀ ರುದ್ರಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಧರ್ಮದರ್ಶಿ, ನಗರಸಭೆ ಮಾಜಿ ಅಧ್ಯಕ್ಷ ಎಲ್. ಸತ್ಯನಾರಾಯಣರಾವ್ ತಿಳಿಸಿದ್ದಾರೆ.

ಬೆಳಗ್ಗೆ 6 ಗಂಟೆಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಅಲಂಕಾರ, ಭಸ್ಮಾರ್ಚನೆ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 9.30 ರಿಂದ 11 ಗಂಟೆಯವರೆಗೆ ಶ್ರೀ ರುದ್ರಹೋಮ ಇರುತ್ತದೆ. ಸಾಯಂಕಾಲ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ 4 ಜಾವದ ರುದ್ರಾಭಿಷೇಕ ಪೂಜೆ ಇರುತ್ತದೆ ಎಂದು ಧರ್ಮದರ್ಶಿ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಎಲ್. ಸತ್ಯನಾರಾಯಣರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು, ಭಕ್ತರು ಎಲ್ಲ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅವರು ಕೋರಿದ್ದಾರೆ.