ಬೆಂಗಳೂರು,ಫೆ.16: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಶ್ರೀ ರೋಜಾ ಗುರೂಜಿ ಇಂಟರ್ನ್ಯಾಷನಲ್ ಟ್ರಸ್ಟ್ ವತಿಯಿಂದ ಭಕ್ತಿಭಾವಪೂರ್ಣ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿತರಣೆಯನ್ನು ಭಕ್ತರಿಗೆ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ವಿಶೇಷ ಪೂಜೆ ಭಕ್ತಿಭಾವದಿಂದ ನೆರವೇರಿತು. ಟ್ರಸ್ಟ್ನ ಸದಸ್ಯರು ಹಾಗೂ ಭಕ್ತರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ ಶಿವನ ಆರಾಧನೆಯಲ್ಲಿ ತೊಡಗಿಸಿಕೊಂಡರು.

ಮಹಾಶಿವರಾತ್ರಿ ಪ್ರಯುಕ್ತ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಾರ್ಯಕ್ರಮದ ಯಶಸ್ಸಿಗೆ ಟ್ರಸ್ಟ್ನ ಕಾರ್ಯಕರ್ತರು ಹಾಗೂ ಸ್ವಯಂಸೇವಕರು ಶ್ರಮಿಸಿದರು.