ತೀರ್ಥಹಳ್ಳಿ, ಜೂ.07: ಪ್ರತಿಷ್ಠಿತ ಕವಲೇದುರ್ಗ ಮಠದ ಸ್ವಾಮೀಜಿ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸೋಮವಾರ ಶಿವಮೊಗ್ಗದಲ್ಲಿ ನಿಧನರಾದರು.


ಶ್ರೀಗಳು ಕೆಲವು ದಿನಗಳ ಹಿಂದಿನಿಂದ ಕೋವಿಡ್ ಕಾಯಿಲೆಯಿಂದ ಬಳಲುತ್ತಿದ್ದು ತೀರ್ಥಹಳ್ಳಿ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು .ಹೆಚ್ಚಿನ ಚಿಕಿತ್ಸೆಗೆ 2 ದಿನಗಳ ಹಿಂದೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶ್ರೀಗಳು ಅಧ್ಯಯನಶೀಲರು, ಸ್ನೇಹಜೀವಿಯಾಗಿದ್ದರು. ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಾಲ್ಕು ಪಿಎಚ್.ಡಿ ಪದವಿ ಪುರಸ್ಕೃತರು, ಸಹೃದಯರು, ಒಳಹೊರಗಿಲ್ಲದ ಶುದ್ಧ ಹೃದಯಿಗಳಾದ, ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಲಿಂ. ಡಾ. ಶ್ರೀ ಮಹಾಂತ ಅಪ್ಪಗಳ ಕೃಪಾಪಾತ್ರರಾಗಿದ್ದ ಶ್ರೀ ಗಳು, ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೆ, ಮಠಕ್ಕೆ ಬಂದ ಭಕ್ತರಿಗೆ ಕೈಯ್ಯಾರೆ ದಾಸೋಹವನ್ನು ಮಾಡಿ ಬಡಿಸುತ್ತಿದ್ದರು.
ಸಿಎಂ ಸಂತಾಪ:

ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಕಾಲಿಕ ಮರಣದಿಂದ ಮಲೆನಾಡಿನ ಧಾರ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

  • ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
    ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಜೂ.14 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
    ” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
    ” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
  • ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
    ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
  • ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
  • ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
    *ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
    *ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
  • ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.

By admin

ನಿಮ್ಮದೊಂದು ಉತ್ತರ

You missed

error: Content is protected !!