: ಜನಸಾಮಾನ್ಯರಿಗೆ ಕಾನೂನಿನ ಅರಿವು ಅತ್ಯಂತ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸAತೋಷ್ ಹೇಳಿದರು.
ಹೊಸಕೊಪ್ಪ-ತಟ್ಟೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕುವೆಂಪು ವಿಶ್ವವಿದ್ಯಾಲಯ, ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರದಲ್ಲಿ ಮಾತನಾಡಿದರು.
ರೈತರು ಮತ್ತು ಜನಸಾಮಾನ್ಯರಿಗೆ ಸಂಬAಧಿಸಿ ಭೂ ವಿವಾದಗಳು ಮತ್ತು ಅವುಗಳಿಗೆ ಪರಿಹಾರಗಳನ್ನು ಅರಿತುಕೊಳ್ಳಬೇಕು. ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಹೊಂದಬೇಕು. ತೊಂದರೆಗೆ ಒಳಗಾದ ಸಂದರ್ಭದಲ್ಲಿ ಯಾವ ರೀತಿ ಮುನ್ಸೂಚನೆ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಜಿ.ಮಧುಸೂದನ್ ಮಾತನಾಡಿ, ಎನ್ಎಸ್ಎಸ್ ಶಿಬಿರಗಳು ವಿವಿಧ ಕಾರ್ಯಕ್ರಮಗಳ ಮೂಲಕ ಗ್ರಾಮಗಳಲ್ಲಿ ಅರಿವನ್ನು ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ಎನ್ಎಸ್ಎಸ್
ಶಿಬಿರಗಳಿಂದ ಗ್ರಾಮಗಳಲ್ಲಿ ಸ್ವಚ್ಛತೆ ಅರಿವು ಮೂಡಿಸಬಹುದು ಮತ್ತು ವಿವಿಧ ಕಾರ್ಯಕ್ರಮಗಳ ಯೋಜನೆ ಮೂಲಕ ಜನರಲ್ಲಿ ವಿವಿಧ ಬಗೆಯ ವಿಷಯಗಳ ಜ್ಞಾನದ ಅರಿವನ್ನು ಮೂಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯವಶ್ಯಕವಾಗಿದ್ದು, ಕಾನೂನಿನ ಅಡಿಯಲ್ಲಿ ಪಡೆಯಬಹುದಾದ ಹಲವಾರು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸದೃಢ ಭಾರತವನ್ನು ನಾವು ಕಟ್ಟಬೇಕಾದರೆ ಯುವಪೀಳಿಗೆಯ ಪಾತ್ರ ಮುಖ್ಯವಾಗಿದೆ. ಈ ರೀತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಅವರಿಗೆ ಅರಿವನ್ನು ಮೂಡಿಸುವುದು ಅತ್ಯಂತ ಉಪಯುಕ್ತಕಾರಿಯಾದ ಅಂಶವಾಗಿದೆ ಎಂದು ತಿಳಿಸಿದರು.

ರಾಷ್ಟಿçÃಯ ಸೇವಾ ಯೋಜನೆ ಅಧಿಕಾರಿ ಜಿ.ಕೆ.ಮಂಜಪ್ಪ, ಡಿವಿಎಸ್ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಎನ್.ಕುಮಾರಸ್ವಾಮಿ, ಸುಮಾ, ಸಹ ಶಿಬಿರಾಧಿಕಾರಿ ಮನು ಎಸ್ ಮೂರ್ತಿ ಮತ್ತು ಸಹಾಯಕ ಎನ್.ಮಂಜುನಾಥ್, ಸಿಬ್ಬಂದಿ, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.