ಭದ್ರಾವತಿ,ಫೆ.20:
ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣಾಗಿದ್ದಾರೆ, ಘಟನೆಗೆ ಪೊಲೀಸ್ ಸಿಬ್ಬಂದಿ ಕಾರಣವಾ? ಅಥವಾ ದಾಂಪತ್ಯದ ಪ್ರೀತಿನಾ? ಪೊಲೀಸರೇ ವಿಚಾರಣೆ ನೆಡೆಸಿ ನೋಡಬೇಕು…!

ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ ನೇಣಿಗೆ ಶರಣಾಗಿರುವ ದಾರುಣವಾದ ಈ ಘಟನೆ ಭದ್ರಾವತಿ ಸಮೀಪದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ನನ್ನ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಹೇಳಲಾಗಿದೆ.

ಪತಿ ಆತ್ಮಹತ್ಯೆ ಬೆನ್ನಿಗೆ ಪತ್ನಿ ನೇಣಿಗೆ ಶರಣಾಗಿದ್ದಾರೆ.
ಭದ್ರಾವತಿ ತಾಲೂಕಿನ ಗೋಣಿಬೀಡು ತವರು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (KSISF) ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು.

ಅವರು ಜೀವನದಲ್ಲಿ ಜುಗುಪ್ಸೆಗೊಂಡು ಫೆ. 14ರಂದು ಜಗದೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ.
ಸ್ವಾತಿ ಅವರು ಸಾಯುವ ಮುನ್ನ ತನ್ನ ತಾಯಿಗೆ ಮೆಸೇಜ್ ಮಾಡಿದ್ದು, ಅದರಲ್ಲಿ ಪೊಲೀಸಪ್ಪರೊಬ್ಬರ ಹೆಸರನ್ನು ಉಲ್ಲೇಖಿಸಿದ್ದಾರೆ.

ಡೆತ್ ನೋಟ್ ಟ್ವಿಸ್ಟ್ ಏನು? ಪೊಲೀಸರೊಬ್ಬರು ತನಗೆ ಪೇಸ್ಬುಕ್ ನಲ್ಲಿ ಮೆಸೇಜ್ ಮಾಡಿದ್ದರು. ಬ್ಲಾಕ್ ಮೇಲ್ ಮಾಡಿದ್ದಲ್ಲದೇ, ಆತ ತನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂದು ಸ್ವಾತಿ ಡೆತ್ ನೋಟ್ನಲ್ಲಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.
