ಶಿವಮೊಗ್ಗ : ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆ.28- ಮಾ.17ರ ವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 06, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 03, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 05 ಮತ್ತು ಸೊರಬದಲ್ಲಿ 02 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 41ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 19009 ವಿದ್ಯಾರ್ಥಿಗಳು ಸದರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 7188ಬಾಲಕರು ಹಾಗೂ 10567ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 17,755 ರೆಗ್ಯೂಲರ್ ವಿದ್ಯಾರ್ಥಿಗಳು, 871 ಪುನರಾವರ್ತಿತ ಅಭ್ಯರ್ಥಿಗಳು, 380 ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗಾಗಿ 03 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ತಲಾ ಮೂರು ಜನರ ಅಧಿಕಾರಿಗಳ 12 ತಂಡವನ್ನು ರಚಿಸಲಾಗಿದ್ದು, ಅಗತ್ಯ ಪೆÇಲೀಸ್ ಭದ್ರತೆ ಒದಗಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಭಾರತೀಯ ನ್ಯಾಯಸಂಹಿತೆ 163ಪ್ರಕಾರ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚಿಸಲಾಗಿದೆ. ಅಲ್ಲದೇ ವಿಶೇಷವಾಗಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಉಚಿತ ಬಸ್ಸೌಲಭ್ಯವನ್ನು ಒದಗಿಸಲಾಗಿದ್ದು, ಬಸ್ ಸಂಚರಿಸುವ ಮಾರ್ಗದಲ್ಲಿನ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದ ಪ್ರವೇಶಪತ್ರವನ್ನು ತೋರಿಸಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದರು.
ಪರೀಕ್ಷಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ ಆತಂಕವಿಲ್ಲದೇ ಸಮಾಧಾನಚಿತ್ತರಾಗಿ ಪರೀಕ್ಷೆಯಲ್ಲಿ ಭಾಗವಹಿಸಿ, ಈವರೆಗಿನ ಅವಧಿಯಲ್ಲಿ ತಾವು ಓದಿದ ವಿಷಯವನ್ನು ಅರಿತು ಸಕಾಲಿಕವಾಗಿ ಉತ್ತರಿಸುವ ಮೂಲಕ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗುವಂತೆ ಸೂಚಿಸಿದ ಅವರು, ಕಲಿಕೆಯಿಂದ ಹಿಂದುಳಿದ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಈಗಾಗಲೇ ವಿಶೇಷ ತರಗತಿಗಳ ಮೂಲಕ ಬೋಧನೆ ನಡೆಸಲಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ಅವರು ಮಾತನಾಡಿ, ಪೆÇೀಷಕರ ಕೋರಿಕೆಯ ಮೇರೆಗೆ ಪ್ರತಿನಿತ್ಯ ಸಂಜೆ ವಿಶೇಷ ಕಲಿಕಾ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಇದರಿಂದಾಗಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದರು.
ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪೆÇೀಷಕರು ತಮ್ಮ ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು ಎಂದ ಅವರು, ಸಾಮಾಜಿಕ ಜಾಲತಾಣಗಳನ್ನು ಸೋರಿಕೆಯಾಗುವ ಪ್ರಶ್ನೆಪತ್ರಿಕೆಗಳು ನಕಲಿ ಹಾಗೂ ನಂಬಲರ್ಹವಾದುವುಗಳಲ್ಲ. ಇದರಿಂದಾಗಿ ವಿಚಲಿತರಾಗದಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಅವರು ಉಪಸ್ಥಿತರಿದ್ದರು.
ಜಿಲ್ಲೆಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಹೊಂದುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದ ಅವರು, ಪ್ರತಿ ವಿದ್ಯಾರ್ಥಿಯ ಕಲಿಕೆಯಲ್ಲಿ ಹಿನ್ನೆಡೆಗೆ ಇರುವ ಸೂಕ್ಷ್ಮ ಕಾರಣಗಳನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯಗೊಳ್ಳುವಂತೆ ಸಿ.ಇ.ಟಿ. ತರಬೇತಿ ತರಗತಿಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗದಂತೆ ನೋಡಿಕೊಳ್ಳುವ ಸದಾಶಯ ಹೊಂದಲಾಗಿದೆ.
-ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ
ಬಾಕ್ಸ್ -22
ಸೋಮವಾರ ರಾತ್ರಿ ಶಿವಮೊಗ್ಗದ ಸೂಳೆಬೈಲಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಹಲ್ಲೆಯಾಗಿ ಆತಮೃತಪಟ್ಟಿದ್ದು, ಖೇದಕರ ಸಂಗತಿ. ಇದು ಯಾರಿಗೂ ಆಗಬಾರದು. ಇಲಾಖೆ ಮೃತನ ಆತ್ಮಕ್ಕೆ ಶಾಂತಿಕೋರಿ, ಸಂತಾಪ ಸೂಚಿಸುತ್ತದೆ. ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿನ ಉಪನ್ಯಾಸಕರು ಪರೀಕ್ಷಾ ಮೌಲ್ಯಮಾಪನಕ್ಕೆ ತೆರಳುವುದರಿಂದ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸಿಇಟಿ, ನೀಟ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಕಾಲೇಜುಗಳ ಉಪನ್ಯಾಸಕರು ಮೌಲ್ಯಮಾಪನಕ್ಕೆ ಬಾರದೇ ಇರುವುದರಿಂದ ಸರ್ಕಾರಿ ಉಪನ್ಯಾಸಕರ ಮೇಲೆ ಕಾರ್ಯಭಾರ ಹೆಚ್ಚಿರುತ್ತದೆ. ಮುಂದಿನ ದಿನಗಳಲ್ಲಿ ತರಬೇತಿ ನೀಡಲು ಯೋಚಿಸಲಾಗುತ್ತಿದೆ.
-ಹೇಮಂತ್ ಎನ್., ಜಿ.ಪಂ. ಸಿಇಓ