ಶಿವಮೊಗ್ಗ: ಜಿಲ್ಲೆಯ ನಾಗರಿಕರಿಗೆ ಮಾರಿ ಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ ಅವಕಾಶ ಕಲ್ಪಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸವಿತಾ ಸಮಾಜದ ಪರವಾಗಿ ಅಭಿನಂದನೆ ಸಲ್ಲಿಸಲಾಗಿದೆ.

ಈ ವಿಶೇಷ ರೈಲು ಸಂಚಾರ ವ್ಯವಸ್ಥೆಯ ಮೂಲಕ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಅನುಕೂಲವಾಗಿದ್ದು, ಈ ಹಿನ್ನಲೆ ಸಂಸದರು ಜನಸಾಮಾನ್ಯರಲ್ಲಿ ಮೆಚ್ಚುಗೆ ಪಾತ್ರವಾಗಿರುತ್ತಾರೆ. ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಮಯದಲ್ಲಿ ಸಾರ್ವಜನಿಕರ ಪ್ರಯಾಣಿಕರಿಗೆ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿ ಈ ಸೇವೆ ಒದಗಿಸಿರುವುದು ಜನಪರ ಆಡಳಿತ ಉತ್ತಮ ಉದಾಹರಣೆಯಾಗಿದೆ. ಈ ಹಿನ್ನಲೆಯಲ್ಲಿ ಸವಿತಾ ಸಮಾಜದ ಸವಿತಾ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಎಂ.ಪ್ರಭಾಕರ್ ರವರು ಬಿ.ವೈ.ರಾಘವೇಂದ್ರ ಅವರಿಗೆ ಅಭಿನೆಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಧಾರ್ಮಿಕ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಂದರ್ಭದಲ್ಲಿ ಇದೇ ರೀತಿ ಸಹಕಾರವನ್ನು ಸಾರ್ವಜನಿಕರಿಗೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.