ಶಿವಮೊಗ್ಗ: ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಮಾ.6 ರಂದು ಮಾರಿಕಾಂಬೆಗೆ ಕುಂಭಾಭಿಷೇಕ ನಡೆಯಲಿದೆ ಎಂದು ಕೋಟೆ ಮಾರಿಕಾಂಬ ಸೇವಾ ಸಮಿತಿ ತಿಳಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಅವರು, ಮಾ.5 ರ ಗುರುವಾರ ಸಂಜೆ 5 ಕ್ಕೆ ಸುಹಾಸಿನಿಯರಿಂದ ಕಲಶ ಸಹಿತ ಗಂಗೆ ಪೂಜೆ, ಪುಣ್ಯಾಹ, ಬ್ರಹ್ಮ ಕಲಶ ಸ್ಥಾಪನೆ ಇತ್ಯಾಗಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಮಾ.6 ರಂದು ಬೆಳಗ್ಗೆ 8 ರಿಂದ ಕಲಾ ತತ್ವನ್ಯಾಸ, ಕಲಾ ಹೋಮ, ದುರ್ಗಾ ಹೋಮ, ಕುಂಭಾಭಿಷೇಕ, ಬ್ರಹ್ಮಕಲಶಾಭಿಷೇಕ ಮಧ್ಯಾಹ್ನ 12 ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ಇರುತ್ತದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಕೋರಿದ್ದಾರೆ.
ನ್ಯವಾದ ಸಮರ್ಪಣೆ
ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆಯ ಯಶಸ್ವಿಗೆ ಸಹಕರಿಸಿ ಸದ್ಭಕ್ತರು ಹಾಗೂ ಸಹಕರಿಸಿದ ಎಲ್ಲರಿಗೂ ಶ್ರೀ ಕೋಟೆ ಮಾರಿಕಾಂಬ ಸೇವಾ ಸಮಿತಿ ಧನ್ಯವಾದ ಸಲ್ಲಿಸಿದೆ.
ದೇವಾಲಯದ ಹೊರ ಮತ್ತು ಒಳಾಂಗಣದಲ್ಲಿ ವಿಶೇಷ ಅಲಂಕಾರ ಮಾಡಿಸಿದ್ದ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಹಾಗೂ ಕಾಂಗ್ರೆಸ್ ಮುಖಂಡರು ಆದ ಎಂ.ಶ್ರೀಕಾಂತ್, ಜಾತ್ರೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಮತ್ತು ಸಿಬ್ಬಂದಿ ವರ್ಗಕ್ಕೆ, ಸ್ವಚ್ಚತೆಗೆ ಆದ್ಯತೆ ನೀಡಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡರು, ಪೌರ ಕಾರ್ಮಿಕರಿಗೆ, ಮೆಸ್ಕಾಂ, ಆರ್ಯ ವೈಶ್ಯ ಮಹಾಜನ ಸಮಿತಿ, ತರಕಾರಿ ಸೇವೆ ನೀಡಿದ್ದ ಯೋಗಣ್ಣ, ಮಾಜಿ ಕಾರ್ಪೋರೇಟರ್ ಪ್ರಭು ಸೇರಿದಂತೆ ಎಲ್ಲಾ ರೀತಿಯ ನೆರವು ನೀಡಿದ್ದ ವಿವಿಧ ಸಂಘ ಸಂಸ್ಥೆಗಳ ಆಡಳಿತ ಮಂಡಳಿ, ದೇವಸ್ಥಾನ ಸಮಿತಿ ಆಡಳಿತ ಮಂಡಳಿ, ನಿರ್ದೇಶಕರುಗಳಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಕೋಟೆ ಮಾರಿಕಾಂಬ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.