ಹತ್ತನೇ ಕ್ಲಾಸಿನವರೆಗೆ ಎಲ್ಲರಿಗೂ ಉಚಿತ ಪುಸ್ತಕಗಳನ್ನು ಕೊಡುವುದರ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯನ್ನ ನೀಡಲಾಗಿದೆ. 1 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ. ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರದ ಬಜೆಟ್ ನಲ್ಲಿ 5, 000 ಕೋಟಿ ಮೀಸಲಿರಿಸಲಾಗಿತ್ತು. ಆದರೆ ಒಂದು ನಯಾ ಪೈಸೆ ಬಿಡುಗಡೆ ಮಾಡಿರಲಿಲ್ಲ. ಆದರೆ ಈ ಬಾರಿ ರಾಜ್ಯ ಸರ್ಕಾರ ಆ ಯೋಜನೆಗೆ ಹಣ ಮಿಸಲಿಟ್ಟಿರುವುದು ಸ್ವಾಗತಾರ್ಹ. ಗಾಂಧೀಜಿಯವರ ಹೆಸರನ್ನು ಚಿರಸ್ಟಾಯೀ ಗೊಳಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಇಂದು ನಾಮಕರಣ ಮಾಡುತ್ತಿರುವುದು ಪ್ರಸಂಶನೀಯವಾದದು. ಒಟ್ಟಾರೆ ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್ ರೈತ ಪರವಾದ ಜನಪರವಾದ ಬಜೆಟ್ ಆಗಿದೆ.
ರು,