ಶಿವಮೊಗ್ಗ: ನಗರದ ಹೊರವಲಯದ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಬಳಿ ಇರುವ ಕೆರೆಯನ್ನು ತುಂಗಾ ಮೇಲ್ದಂಡೆ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಗರದ ಜಲಮೂಲಗಳನ್ನು ಸಂರಕ್ಷಿಸುವುದು ನಮ್ಮ ಕರ್ತವ್ಯ. ತುಂಗಾ ಮೇಲ್ದಂಡೆ ಯೋಜನೆಯಡಿ ಈ ಕೆರೆಯ ಹೂಳೆತ್ತಿ, ನೀರು ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಇದರಿಂದ ಈ ಭಾಗದ ಅಂತರ್ಜಲ ವೃದ್ಧಿಯಾಗುವುದಲ್ಲದೆ, ಪರಿಸರ ಸಮತೋಲನವನ್ನು ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ,” ಎಂದು ತಿಳಿಸಿದರು.

ಕಾಮಗಾರಿಯನ್ನು ಶೀಘ್ರವಾಗಿ ಮತ್ತು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಶ್ರೀ ಆನಂದ್,ಶ್ರೀ ಮಲ್ಲಿಕಾರ್ಜುನ, ಶ್ರೀ ಮಂಜುನಾಥ್, ಶ್ರೀ ಶಿವುಕುಮಾರ್, ಶ್ರೀ ಮಾಲತೇಶ್, ಶ್ರೀ ನಾಗರಾಜ, ಶ್ರೀಮತಿ ಶಶಿಕಲಾ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.