ಶಿವಮೊಗ್ಗ: ನಂಜಪ್ಪ ಆಸ್ಪತ್ರೆ ಮತ್ತು ನಂಜಪ್ಪ ಲೈಫ್ ಕೇರ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶಾಹಿ ಗಾರ್ಮೆಂಟ್ಸ್ ಹಾಗೂ ಶಾಹಿ ಎಕ್ಸಪೋರ್ಟ್ ಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಮಹಿಳಾ ಸ್ವಚ್ಛತೆ ಮತ್ತು ಕ್ಯಾನ್ಸರ್ ಜಾಗೃತಿ ಕುರಿತು ವಿಶೇಷ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು.
ನಂಜಪ್ಪ ಆಸ್ಪತ್ರೆಯ ಡಾ. ಆರ್. ಶಾಂತಲಾ ಮಾತನಾಡಿ,’ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಹೊಂದುವುದು ಅತ್ಯಂತ ಮುಖ್ಯವಾಗಿದ್ದು, ವೈಯಕ್ತಿಕ ಸ್ವಚ್ಛತೆ, ಮಾಸಿಕ ಚಕ್ರದ ಸಮಯದಲ್ಲಿ ಪಾಲಿಸಬೇಕಾದ ಆರೋಗ್ಯಕರ ಕ್ರಮಗಳು ಹಾಗೂ ಗರ್ಭಾಶಯ ಮತ್ತು ಸ್ತನ ಕ್ಯಾನ್ಸರ್ ಕುರಿತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖವಾಗುವ ಸಾಧ್ಯತೆ ಹೆಚ್ಚುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳೆಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಹಿ ಗಾರ್ಮೆಂಟ್ಸ್ ಮತ್ತು ಶಾಹಿ ಎಕ್ಟೋರ್ಟ್ಸ್ ಸಂಸ್ಥೆಯ ಮಹಿಳಾ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ಸಂಬಂಧಿತ ಮಾಹಿತಿ ಪಡೆದುಕೊಂಡರು.