ಶಿವಮೊಗ್ಗ, ಮಾ.೦೯:
ಬೈಕ್ ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ಪತ್ರಕರ್ತ ಮೃತಪಟ್ಟ ಘಟನೆ ಶಿವಮೊಗ್ಗ ಬೆಂಕಿನಗರದ ಬಳಿ ನಡೆದಿದೆ.

ಅನಿಲ್ ನಾಯ್ಕ್ (೪೪) ಮೃತ ಪತ್ರಕರ್ತ. ರವಿವಾರ (ಮಾ.೦೮) ರಾತ್ರಿ ೧೦ ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಅನಿಲ್ ಮೃತಪಟ್ಟಿದ್ದಾರೆ,
ಖಾಸಗಿ ಸುದ್ದಿವಾಹಿನಿಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಅನಿಲ್, ಕ್ಯಾಮರಾಮೆನ್ ಆಗಿಯೂ ೧೦ ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ್ದರು.
ಅನಿಲ್ ಮೃತದೇಹ ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತಾಪ: ತುಂಗಾ ತರಂಗ ಬಳಗ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ಪ್ರೆಸ್ ಟ್ರಸ್ಟ್, ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿವೆ.