ಶಿವಮೊಗ್ಗ,ಜೂ.10:ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಹಸಿಗಾಯದ ಮೇಲೆ ಬಿಸಿ ಬರೆ ಎಳೆದಂತಾಗಿದೆ ಎಂದು ಆರೋಪಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೊರೊನಾ ಸೋಂಕು ಮತ್ತು ಲಾಕ್‍ಡೌನ್‍ನಿಂದಾಗಿ ಜನ ಸಾಮಾನ್ಯರು ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ. ಇಂತಹ ವಿಪತ್ತು ಪರಿಸ್ಥಿತಿಯಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿಜೆಪಿ ಸರ್ಕಾರ ನಿರ್ದಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ ಹಸಿಗಾಯದ ಮೇಲೆ ಬಿಸಿ ಬರೆ ಎಳೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ವಿದ್ಯುತ್ ದರ 200 ರಿಂದ 300 ಪಟ್ಟು ಹೆಚ್ಚಿದೆ. ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನೀಡಿರುವ ಕಾರಣಗಳು ಜನರನ್ನು ತಪ್ಪುದಾರಿಗೆಳೆಯುವಂತಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಇಂದು ನಷ್ಟದಲ್ಲಿದ್ದರೆ ಅದಕ್ಕೆ ರಾಜ್ಯ ಸರ್ಕಾರದ ಅದಕ್ಷತೆ,ಭ್ರಷ್ಟಾಚಾರ ಮತ್ತು ಕಾರ್ಪೋರೇಟ್ ಕಂಪನಿಗಳ ಓಲೈಕೆ ಕಾರಣ. ಸಮರ್ಥನೀಯವಲ್ಲದ, ಅವೈಜ್ಞಾನಿಕ ಮತ್ತು ಜನವಿರೋಧಿಯಾಗಿರುವ ವಿದ್ಯುತ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ಯುವ ಕಾಂಗ್ರೆಸ್ ನಿಂದ ರಾಜ್ಯದಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ವಿವಿಧ ವಿದ್ಯುತ್ ಉತ್ಪಾದನೆಯ ಮೂಲಗಳಿಂದ ಉತ್ಪಾದನೆಯಾಗುತ್ತಿದ್ದರೂ ಕೂಡ ಬೇರೆ ಕಡೆಯಿಂದ ವಿದ್ಯುತ್ ಖರೀದಿಸುವ ಅಗತ್ಯವಿಲ್ಲ ಮತ್ತು ಸ್ವಾಭಾವಿಕ ಉತ್ಪಾದನೆಯ ಘಟಕಗಳನ್ನು ಹೆಚ್ಚು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಜೂ.14 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ. - ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. - ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ. - ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.
ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಇಂದು ನಷ್ಟದಲ್ಲಿದ್ದರೆ ಇದರ ಹೊಣೆಯನ್ನು ರಾಜ್ಯ ಸರ್ಕಾರವೇ ವಹಿಸಬೇಕಾಗುತ್ತದೆ. ರಾಜ್ಯದ ಬಿಜೆಪಿ ಸರ್ಕಾರ ಯುನಿಟ್‍ಗೆ ಹೆಚ್ಚುವರಿ 50 ಪೈಸೆ ನೀಡಿ ಕೇಂದ್ರ ಸರ್ಕಾರದಿಂದ ವಿದ್ಯುತ್ ಖರೀದಿಸುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 5-6 ಸಾವಿರ ಕೋಟಿ ರೂಪಾಯಿ ಹೊರೆಯಾಗುತ್ತಿದೆ. ಈ ಪೊಲಾಗುತ್ತಿರುವ ಈ ಹಣವನ್ನು ಉಳಿಸಿದರೆ ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳನ್ನು ನಷ್ಟದಿಂದ ಪಾರುಮಾಡಬಹುದು ಎಂದರು.
ಅದಾನಿ ಮೊದಲಾದ ಕಾರ್ಪೋರೆಟ್ ಕಂಪನಿಗಳು ಹಾಗೂ ಕೇಂದ್ರದ ಗ್ರಿಡ್ಗಳಿಂದ ರಾಜ್ಯ ಸರ್ಕಾರ 38594 ಮಿಲಿಯನ್ ಯೂನಿಟ್‍ಗಳನ್ನು ಖರೀದಿಸುತ್ತಿದೆ. ಆದರೆ ಬಳಕೆ ಮಾಡುತ್ತಿರುವುದು ಮಾತ್ರ ಕೇವಲ 19921 ಮಿಲಿಯನ್ ಯೂನಿಟ್ಗಳು. ಇದಕ್ಕಾಗಿ ರಾಜ್ಯ ಸರ್ಕಾರ 4388 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಒಟ್ಟಾರೆಯಾಗಿ ಲೆಕ್ಕ ಹಾಕಿದರೆ ಎಲ್ಲಾ ಮೂಲಗಳಿಂದ ಪಾವತಿಸಬೇಕಾದ ಮೊತ್ತಕ್ಕಿಂತ 5460 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಪಾವತಿಸಲಾಗುತ್ತಿದೆ. ಕಷ್ಟದಲ್ಲಿರುವ ಜನರಿಂದ ಕಿತ್ತುಕೊಂಡು ಕಾರ್ಪೋರೆಟ್ ಕಂಪೆನಿಗಳನ್ನು ಉದ್ದಾರ ಮಾಡಲು ರಾಜ್ಯ ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ಈಗಲೂ ಕಾಲ ಮಿಂಚಿಲ್ಲ. ವಿದ್ಯುಚ್ಛಕ್ತಿ ಕುರಿತಾದ ಪರಿಣತರು, ವಿರೋಧ ಪಕ್ಷಗಳ ಮುಖಂಡರ ಸಭೆಯನ್ನು ಕರೆದು ವಿದ್ಯುಚ್ಛಕ್ತಿ ದರಗಳನ್ನು ಕಡಿಮೆ ಮಾಡುವುದು ಹೇಗೆ ಎಂದು ಸಲಹೆಗಳನ್ನು ಪಡೆಯಬೇಕು. ಅಲ್ಲಿಯವರೆಗೆ ವಿದ್ಯುಚ್ಛಕ್ತಿ ದರಗಳನ್ನು ಹೆಚ್ಚಿಸಬಾರದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೇಶ್,ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್. ಕುಮರೇಶ್, ಗ್ರಾಮಾಂತರ ಅಧ್ಯಕ್ಷ ಈ.ಟಿ. ನಿತಿನ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಗಳಾದ ಆರ್ ಕಿರಣ್ , ಟಿವಿ ರಂಜಿತ್ ಪದಾಧಿಕಾರಿಗಳಾದ ಆರ್ .ಮಸ್ತಾನ್, ಎಂ.ರಾಹುಲ್, ನಿಖಿಲ್, ಗಗನ್ ಗೌಡ, ರಾಹುಲ್ ಸೀಗೆಹಟ್ಟಿ, ದೇವರಾಜ್, ಶ್ರೀನಿವಾಸ್, ಪ್ರದೀಪ್, ಇರ್ಫಾನ್, ಮಂಜು, ನವೀನ್, ಚೇತನ್,ವಿನಯ್ ಇತರರು ಇದ್ದರು.