ಶಿವಮೊಗ್ಗ : ಶಿವಮೊಗ್ಗ, ಮೈಸೂರು, ಹಾಸನ, ತುಮಕೂರು, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಜೂನ್ 14 ರ ಬಳಿಕ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಸಿಎಂ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಮಾಡಲಾಗಿದೆ. ಸೋಂಕು ಹೆಚ್ಚಾಗಿರುವ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವಿಡಿಯೋ ಸಂವಾದ ಮಾಡಿ ಮಾತನಾಡಿದ್ದಾರೆ. 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮುಂದುವರೆಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಜೂ.14 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ. - ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. - ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ. - ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.