ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 90 ನೇ ರಕ್ತದಾನ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸೇರಿದಂತೆ 31 ಜನ ರಕ್ತದಾನ ಮಾಡಿದರು

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್ ರವರು ಹಾಗೂ ಸಂಜೀವ್ ಕುಮಾರ್ ಪೊಲೀಸ್ ಉಪಾಧಿಕ್ಷಕರು ಶಿವಮೊಗ್ಗ ಬಿ ಉಪವಿಭಾಗ ರವರು ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರ ಉದ್ಘಾಟಿಸಿದರು. ಇನ್ಸ್ ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ ನೇತೃತ್ವವಹಿಸಿದ್ದರು.
ಎಲ್ಲಾ ರಕ್ತದಾನಿಗಳಿಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹೃತ್ಪೂರ್ವಕವಾಗಿ ಅಭಿನಂದಿಸಿದೆ.