ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ ವಿಜೇತ ಪತ್ರಿಕೆ ಮತ್ತು ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಸೆರೆ ಹಿಡಿದ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವು ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವನ್ಯಜೀವಿ ಮತ್ತು ಜನ ಜೀವನ ಛಾಯಾಚಿತ್ರಗಳು ಜನಮನ ಸೂರೆಗೊಂಡಿದೆ,

ಛಾಯಾಚಿತ್ರ ಪ್ರದರ್ಶನವನ್ನು ಸಚಿವ ಮಧು ಬಂಗಾರಪ್ಪ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು, ಕಸಾಪ ಜಿಲ್ಲಾಧ್ಯಕ್ಷರಾದ ಡಿ. ಮಂಜುನಾಥ್ ಅವರು ಪತ್ರಿಕೆ ಮತ್ತು ವನ್ಯಜೀವಿ ಛಾಯಾಗ್ರಹಕ ಶಿವಮೊಗ್ಗ ನಾಗರಾಜ್ ಅವರನ್ನು ಅಭಿನಂದಿಸಿದರು…