ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರವು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಸಡಿಲಿಕೆ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಮುಂದುವರಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದ್ದು , ಉಳಿದ ಜಿಲ್ಲೆಗಳಿಗೆ ಕೆಲವು ವಿನಾಯಿತಿ , ಕೆಲವು ನಿರ್ಬಂಧ ಸಡಿಲಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ . ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೇಗೆ ಅವಕಾಶ ಮಾಡಿಕೊಡಲಾಗಿದೆ.