ಶಿವಮೊಗ್ಗ: ಉಡುಪಿಯ ಬಂಟಕಲ್ನ ಶ್ರೀ ಮಾಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ವರ್ನೋತ್ಸವ-2026 ಕಾರ್ಯಕ್ರಮದಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ಎಂಜಿನಿಯರಿಂಗ್ ವಿಭಾಗದ 6ನೇ ಸೆಮಿಸ್ಟರ್ನ ವಿದ್ಯಾರ್ಥಿಗಳ ತಂಡ ಚಾಂಪಿಯನ್ಸ್ಗಳಾಗಿ ಹೊರಹೊಮ್ಮಿದ್ದಾರೆ.

ತಾಂತ್ರಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಂಯೋಜನೆಯಾಗಿದ್ದ ಈ ಉತ್ಸವದಲ್ಲಿ ಪ್ರಾಮ್ಟ್ ಟು ಪ್ರಾಡಕ್ಟ್ (Prompt to Product), ಪಿಚ್ಚಥಾನ್, ಆಶು ಭಾಷಣ, ಭರತನಾಟ್ಯ, ಸಂಗೀತದ ಮ್ಯಾರಥಾನ್ ಮತ್ತು ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯರಾಗಿ ಭಾಗವಹಿಸಿದ್ದರು. ಆಶುಭಾಷಣ ಸ್ಪರ್ಧೆಯಲ್ಲಿ ಕವನ.ಆರ್ (ಪ್ರಥಮ), ಪಿಚ್ಚಥಾನ್ (ಪ್ರಥಮ), ಸಂಗೀತದ ಮ್ಯಾರಥಾನ್ (ದ್ವಿತೀಯ) ಸ್ಥಾನ ಪಡೆದಿದ್ದಾರೆ. ತಂಡವನ್ನು ಸಹ ಪ್ರಾಧ್ಯಾಪಕಿ ಡಾ.ಶ್ವೇತಾ.ಎಚ್.ಆರ್ ಸಂಯೋಜಿಸಿದ್ದರು.
ಸಾಧಕ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗ ಅಭಿನಂದಿಸಿದೆ.