ಶಿವಮೊಗ್ಗ : ಲಯನ್ ಸಫಾರಿಯಲ್ಲಿ ನೀರಾನೆ ದಾಳಿಗೆ ಬಲಿಯಾದ ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿನ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಆಧ್ಯ ರಂಗಸ್ವಾಮಿ ಅವರು ಪರಿಶೀಲನೆ ನಡೆಸಿ ಮೃಗಾಲಯದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು

.
ನಂತರ ವೈದ್ಯೆಯ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ತಿಳಿಸಿದ ಅವರು ಬನ್ನೇರುಘಟ್ಟದ ನೀರಾನೆಗೆ ಸಮೀಕ್ಷಾ ಹೆಸರು ಇಡಲಾಗುವುದು. ವೈದ್ಯಯ ಸಾವಿಗೆ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಘಟನೆಯ ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.