ಶಿವಮೊಗ್ಗ , |
ಕನ್ನಡ ಉಪನ್ಯಾಸಕರಾಗಿದ್ದ ಸುರೇಶ್ ಅವರ ಸುಡುತ್ತಿರುವ ಭದ್ರಾವತಿ ತಾಲ್ಲೂಕಿನ ಹನುಮಂತಪುರದ ತಮ್ಮ ಅಡಿಕೆ ತೋಟವೊಂದರಲ್ಲಿ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ವಾಸವಿದ್ದ ಸುರೇಶ್ ಸಾವು ನಾನಾ ಅನುಮಾನಗಳನ್ನು ಹುಟ್ಟಿಸಿದೆ. ಇದೊಂದು ಕೊಲೆ ಪ್ರಕರಣ ಎನ್ನಲಾಗುತ್ತಿದೆ., ಈ ಪ್ರಕರಣ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದ, ಹಾಲಿ ರಜೆಯ ಮೇಲಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ ಬರುವುದಾಗಿ ಮನೆಯವರಿಗೆ ತಿಳಿಸಿ ಕಳೆದ ಶನಿವಾರ ಮನೆಯಿಂದ ಹೊರಟಿದ್ದರು. ಆದರೆ, ನಿನ್ನೆ ಮುಂಜಾನೆ ಆರರ ಹೊತ್ತಿಗೆ ಅವರದ್ದೇ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್, ಸುರೇಶ್ ಅವರು ಅವರದ್ದೇ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳ ತಲುಪಿದಾಗ ಶವದ ಸುತ್ತ ಬೆಂಕಿ ಉರಿಯುತ್ತಿತ್ತು. ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮೃತ ಸುರೇಶ್ ಅವರ ದ್ವಿಚಕ್ರ ವಾಹನ ಮತ್ತು ಬ್ಯಾಗ್ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸುರೇಶ್ ಅವರ ಮೊಬೈಲ್ ಫೋನ್ ಸ್ಥಳದಲ್ಲಿ ಸಿಕ್ಕಿದೆ. ಅದನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಇನ್ನು, ಪ್ರಮುಖಗಾವಿ ಮೃತ ಸುರೇಶ್ ಕುಟುಂಬಸ್ಥರು ಯಾರ ವಿರುದ್ಧವೂ ಸಹ ಅನುಮಾನ ವ್ಯಕ್ತಪಡಿಸಿಲ್ಲ. ಆದರೂ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆಗೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.