ಶಿವಮೊಗ್ಗ ಮಾರ್ಚ್ 31 ; 2026-27 ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆ ಮೂಲಕ 6ನೇ ತರಗತಿಯ 18 ಸ್ಥಾನಗಳಿಗೆ ದಾಖಲಿಸಿಕೊಳ್ಳಲು 5ನೇ ತರಗತಿಯಲ್ಲಿ 60% ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಏ. 15 ರಿಂದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಎಲ್ಲಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗಳ ಕಚೇರಿ, ದೂ.ಸಂ: 08182-200266/ 9482762350/ 7022796636 ಗಳನ್ನು ಸಂಪರ್ಕಿಸುವುದು.