ಶಿವಮೊಗ್ಗ,ಜೂ.12:
ಶನಿವಾರವಾದ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ 489 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ.
ಇಂದಿನ ಪರೀಕ್ಷೆ ಫಲಿತಾಂಶದಲ್ಲಿ ಅತಿ ಹೆಚ್ಚು ನೆಗಿಟೀವ್ ಬಂದಿದೆ. ಸಾವಿನ ಸಂಖ್ತೆ 6. ಜಿಲ್ಲೆಯಲ್ಲಿ ಇಂದು 5368 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4192 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 06 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 909 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 696 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1632 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 1021 ಜನ ಸೋಂಕಿನಿಂದ ದಾಖಲಾಗಿದ್ದಾರೆ. 1309 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ಈ ವರದಿಯನುಸಾರ ಇಂದು 24 ವಿದ್ಯಾರ್ಥಿಗಳು ಹಾಗೂ 8 ಸಿಬ್ಬಂದಿಗಳಿಗೆ ಪಾಸಿಟೀವ್ ಬಂದಿದೆ.
ತಾಲೂಕಿನ ವರದಿ
ಶಿವಮೊಗ್ಗ : 179
ಭದ್ರಾವತಿ : 105
ಶಿಕಾರಿಪುರ : 46
ತೀರ್ಥಹಳ್ಳಿ : 19
ಸೊರಬ : 43
ಸಾಗರ : 47
ಹೊಸನಗರ : 37
ಹೊರಜಿಲ್ಲೆ: 13
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಜೂ.21 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ. - ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. - ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ. - ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.