ಶಿವಮೊಗ್ಗ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ನಿಚ್ಚಳವಾಗಿದ್ದು, ಇದೊಂದು ದಾಖಲೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ಹೇಳಿದರು.

ಗುರುವಾರ ಸಂಜೆ ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ‘ಶೆಟ್ಟರ ಸಂತೆ’ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿರೋಧಿ ಮಾತುಗಳು ಕೇಳಿ ಬರುತ್ತಿವೆ. ಅದರಲ್ಲೂ ಮುಸ್ಲಿಮರೇ ಹೆಚ್ಚಿರುವ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಉಲ್ಟಾ ಆಗಲಿದೆ ಎಂದರು.

ಈ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿರುವ ಸಿಎಂ ಸಿದ್ದರಾಮಯ್ಯನವರು ಅಲ್ಲಿನ ವಾತಾವರಣದಿಂದ ಹತಾಶರಾಗಿದ್ದಾರೆ. ಇದಕ್ಕಾಗಿಯೇ ಆ ಎರಡೂ ಕ್ಷೇತ್ರಗಳನ್ನು ಬಿಟ್ಟು ಹೋಗದಂತೆ ಹಲವು ಸಚಿವರಿಗೆ ತಾಕೀತು ಮಾಡಿದ್ದಾರೆ. ಸಚಿವರು ಸೂಟ್ ಕೇಸ್ ಇಟ್ಟುಕೊಂಡು ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಮತದಾರರು ಒಲವು ಬಿಜೆಪಿ ಕಡೆ ಇದೆ ಎಂದರು.