ತೆಲಂಗಾಣ : ಹನಮಕೊಂಡ ಜಿಲ್ಲೆಯಲ್ಲಿ ಆಘಾತಕಾರಿ ಅಪರಾಧ ಬೆಳಕಿಗೆ ಬಂದಿದ್ದು, ಪತ್ನಿ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಬಹುದೆಂಬ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಆರೋಪಿ ಅಜರುದ್ದೀನ್ ಎಂದು ಗುರುತಿಸಲಾಗಿದ್ದು, ಐನವೋಲು ಮಂಡಲದ ಪುನ್ನೇಲ ಗ್ರಾಮದ ಹೊರವಲಯದಲ್ಲಿ ತನ್ನ ಪತ್ನಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದನು. ಅಲ್ಲಿ ಈಜುಕೊಳ ನಡೆಸುತ್ತಿದ್ದನು. ಆಕೆ ಈ ಹಿಂದೆ ಎರಡು ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮೂರನೇ ಬಾರಿಗೆ ಫರ್ಹತ್ ಗರ್ಭಿಣಿಯಾಗಿದ್ದು ಬಾರಿಯೂ ಹುಟ್ಟಲಿರುವ ಮಗು ಹೆಣ್ಣು ಮಗುವಾಗಿರುತ್ತದೆ ಎಂಬ ಅನುಮಾನದಿಂದ

ಅಜರುದ್ದೀನ್ ಅವಳನ್ನು ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದನು. ನಾಲ್ಕು ವರ್ಷಗಳ ನಂತರ, ಈಗ ಮತ್ತೆ ಗರ್ಭಿಣಿಯಾಗಿದ್ದು ಅದೇ ಕಾರಣಕ್ಕಾಗಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಪತ್ನಿ ಮೇಲೆ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ. ಇದಕ್ಕೆ ಆಕೆ ನಿರಾಕರಿಸಿದ್ದಕ್ಕೆ

ತನ್ನ ಹೆಂಡತಿ ಮತ್ತು ಮಕ್ಕಳನ್ನು ತಾನು ನಿರ್ವಹಿಸುತ್ತಿದ್ದ ಈಜುಕೊಳಕ್ಕೆ ಕರೆದೊಯ್ದು, ನೀರಿಗೆ ತಳ್ಳಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಈ ಘಟನೆಯನ್ನು ಅಪಘಾತವೆಂದು ಬಿಂಬಿಸಲು ಪ್ರಯತ್ನಿಸಿದ್ದನು. ಆದಾಗ್ಯೂ, ಹೆಂಡತಿ ತಂದೆಗೆ ಅಜರುದ್ದೀನ್ ಮೇಲೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರಿಗೆ ದೂರು ನೀಡಿದ್ದರು. ಪೊಲೀಅಗಸರು ಆತನ ವಿಚಾರಣೆ ನಡೆದ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.