ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 335 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4841 ಸಕ್ರಿಯ ಪ್ರಕರಣಗಳಿವೆ.
4298 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3518 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 05 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 923 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 470 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1479 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 1009 ಜನ ಸೋಂಕಿನಿಂದ ದಾಖಲಾಗಿದ್ದಾರೆ. 854 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ತಾಲೂಕಿನ ವರದಿ
ಶಿವಮೊಗ್ಗ : 118
ಭದ್ರಾವತಿ : 73
ಶಿಕಾರಿಪುರ : 46
ತೀರ್ಥಹಳ್ಳಿ : 18
ಸೊರಬ : 16
ಸಾಗರ : 36
ಹೊಸನಗರ : 10

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

  • ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
    ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಜೂ.14 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
    ” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
    ” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
  • ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
    ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
  • ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
  • ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
    *ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
    *ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
  • ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.

By admin

ನಿಮ್ಮದೊಂದು ಉತ್ತರ

You missed

error: Content is protected !!