ಶಿವಮೊಗ್ಗ; ಏಪ್ರಿಲ್-18 ; : ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ. 22ರವರೆಗೆ 9ನೇ ಸುತ್ತಿನ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮವನ್ನು

ಹಮ್ಮಿಕೊಂಡಿದೆ.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ಸಿಬ್ಬಂದಿಗಳು ಮನೆಮನೆಗೆ ತೆರಳಿ ಉಚಿತವಾಗಿ ಲಸಿಕೆಯನ್ನು ಹಾಕಲಿದ್ದು, ಜಾನುವಾರು ಮಾಲೀಕರು ಇಲಾಖಾ ಸಿಬ್ಬಂದಿಗಳೊಂದಿಗೆ ಸಹಕರಿಸಿ ಕಾಲುಬಾಯಿ ರೋಗಮುಕ್ತ ಜಿಲ್ಲೆಯನ್ನಾಗಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.