ಜಿಲ್ಲೆಯಲ್ಲಿ ಅಡಿಕೆ ಬೆಳೆ ರೈತರ ಮುಖ್ಯ ಬೆಳೆಯಾಗಿದ್ದು ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆಗೆ ಕಾಡುತ್ತಿರುವ ಹಳದಿ ರೋಗ, ಎಲೆ ಚುಕ್ಕಿ ರೋಗ ಮತ್ತಿತರ ಕಾಯಿಲೆಗಳಿಂದಾಗಿ ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಸಾಕಷ್ಟು ಬೆಳೆ ನಷ್ಟ ಅನುಭವಿಸಿದ್ದು ಸರ್ಕಾರ ನೀಡುತ್ತಿರುವ ಬೆಳೆ ಪರಿಹಾರವನ್ನು ಹೆಚ್ಚಿಸಲು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆಯಲು ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರ ಮುಖಂಡತ್ವದಲ್ಲಿ ನಿಯೋಗ ಕೊಂಡೊಯ್ಯಲಾಗುವುದೆಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಚ್ ಎನ್ ನಾಗರಾಜ್ ಹೇಳಿದರು.
ಅವರು ಜಿಲ್ಲಾ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಕೆಲವು ಅಧಿಕಾರಿಗಳ ನಿರ್ಲಕ್ಷದಿಂದಾಗಿ ಬೆಳೆವಿಮೆಯಲ್ಲಿ ಬಹಳಷ್ಟು ತಾರತಮ್ಯವಾಗುತ್ತಿದೆ ಅನೇಕ ಮಳೆ ಮಾಪನ ಕೇಂದ್ರಗಳು ಕೆಟ್ಟು ಹೋಗಿರುತ್ತವೆ ಇದರ ಆಧಾರದ ಮೇಲೆಯೇ ಬೆಳೆವಿಮೆ ನಿಗದಿಯಾಗುವುದರಿಂದ ಪಕ್ಕದ ಕೇಂದ್ರದ ಮಳೆಮಾಪನದ ಆಧಾರದ ಮೇಲೆ ವಿಮೆ ನಿಗದಿ ಮಾಡುತ್ತಾರೆ ಇದರಿಂದಾಗಿ ರೈತರಿಗೆ ಅನ್ಯಾಯವಾಗುತ್ತಿದೆ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಕಾಡುತ್ತಿರುವ ಅನೇಕ ರೋಗಗಳಿಂದಾಗಿ ರೈತರು ಬಸವಳಿದು ಹೋಗಿರುತ್ತಾರೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಸೂಕ್ತ ಪರಿಹಾರಗಳನ್ನು ಒದಗಿಸಿ ಸಂಕಷ್ಟದಿಂದ ದೂರ ಮಾಡ ಬೇಕೆಂದು ಹೇಳಿದರು.
ತೋಟಗಾರಿಕಾ ಇಲಾಖೆಯಲ್ಲಿ ಲಭ್ಯವಿರುವ ಸೌಕರ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕಲ್ಲದೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅವಶ್ಯವಾಗಿದೆ ಎಂದು ರಾಜ್ಯಾಧ್ಯಕ್ಷ ನಗರದ ಮಹಾದೇವಪ್ಪ ತೋಟಗಾರಿಕಾ ಅಧಿಕಾರಿಗಳಿಗೆ ಕರೆ ನೀಡಿದರು.
ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಶ್ರೀಧರ್, ಖಜಾಂಚಿ ಸತೀಶ್, ಪದನಿಮಿತ್ತ ಕಾರ್ಯದರ್ಶಿ ಹಾಗೂ ಜಂಟಿ ಕೃಷಿ ನಿರ್ದೇಶಕರಾದ ಡಾ. ಕಿರಣ್ ಕುಮಾರ್ ಉಪಸ್ಥಿತರಿದ್ದ ಈ ಸಭೆಯಲ್ಲಿ ಕೆಸ್ತೂರ್ ಮಂಜುನಾಥ್, ವಾಟಗೋಡು ಸುರೇಶ್, ಮಹೇಶ್ ಉಲ್ಮಾರ್, ಮಲ್ಲಿಕಾರ್ಜುನಗೌಡ್ರು, ಸಿ.ಲೋಕೇಶ್ವರ ಮತ್ತಿತರ ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕರುಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯ ರೈತರ ಕಾರ್ಯಕ್ರಮಗಳನ್ನು ಸಭೆಗೆ ತಿಳಿಸಿದರು. ಸಹಾಯಕ ಕೃಷಿ ನಿರ್ದೇಶಕ ಕಾಶಿನಾಥ್ ಸ್ವಾಗತಿಸಿ ನಿರೂಪಿಸಿದ