ಬೆಂಗಳೂರು,ಜೂ.18:
ಶಿವಮೊಗ್ಗ ಜಿಲ್ಲೆಯಲ್ಲಿ ಬರುವ ಸೋಮವಾರದಿಂದ ಲಾಕ್ ಡೌನ್ ಪ್ರೀ ಏನಿಲ್ಲ. ಶೇ. 50 ರಷ್ಟು ಅಷ್ಟೇ ರಿಯಾಯಿತಿ.
ಮುಖ್ಯಮಂತ್ರಿ ಬಿ.ಎ. ಯಡಿಯೂರಪ್ಪ ಆದೇಶದಂತೆ ಶಿವಮೊಗ್ಗ ಜಿಲ್ಲೆಗೆ ಕೆಲ ಕಂಡೀಷನ್ ಗಳಿವೆ.

ರಾಜ್ಯದೆಲ್ಲಾ ಮಾಹಿತಿ ಇಲ್ಲಿದೆ ನೋಡಿ.

ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.
ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.
ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
• ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.
ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

  • ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
    ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಜೂ.14 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
    ” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
    ” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
  • ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
    ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
  • ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
  • ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
    *ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
    *ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
  • ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.

By admin

ನಿಮ್ಮದೊಂದು ಉತ್ತರ

You missed

error: Content is protected !!