ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಕುರಿತಂತೆ ನಾಳೆ ನಿರ್ಧಾರ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲೆಯಲ್ಲಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ಜಿಲ್ಲೆಯ ವರ್ತಕರು ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಿ 3 ಗಂಟೆ ನಂತರ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡುತ್ತಿದ್ದಾರೆ. ಹೀಗಾಗಿ ನಾಳೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಬೇಕೋ ಬೇಡವೂ ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.