ಜಿಲ್ಲಾ ಪೊಲೀಸ್ ಇಲಾಖೆ ಮತ್ತು ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಜಿಲ್ಲಾ ಪೊಲೀಸ್ ಎಎಸ್ಐ, ಎಆರ್ಎಸ್ಐ ರವರುಗಳಿಗೆ ಆಯೋಜಿಸಿದ್ದ ಉಚಿತ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ಆರೋಗ್ಯ ತಪಾಸಣೆಯೊಂದಿಗೆ ಒಂದು ದಿನದ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.
ತಪಾಸಣೆಯಲ್ಲಿ ಅಲ್ಟ್ರಾ ಸೌಡ್ ಸ್ಕಯಾನಿಂಗ್, ಸಿ-ಆರ್ಮ್ ಫ್ಲೊರೋ ಸ್ಕೋಪ್, ಕಿಡ್ನಿ ಸ್ಟೋನ್ ಸ್ಕ್ಯಾನಿಂಗ್ ಇಸಿಜಿ ರಿಪೋರ್ಟ್ ಸಹಿತ, ಮಧುಮೇಹ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆ ಡಾ. ಚಂದ್ರಶೇಖರ್ ಅವರು ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತ, ಆರಕ್ಷಕರು ಸದಾ ಒತ್ತಡದಲ್ಲಿ ಕೆಲಸ ಕಾರ್ಯವನ್ನು ನಿರ್ವಹಿಸುತ್ತಾರೆ. ವೈದ್ಯರ ಸಲಹೆಯಂತೆ ಸರಿಯಾದ ಸಮಯಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಜೀವನ ನಡೆಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ ಸೇರಿದಂತೆ ಆಸ್ಪತ್ರೆಯ ಸಿಬ್ಬಂಧಿಯವರು ಹಾಜರಿದ್ದು. ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತೃಪ್ತಿ ಹೆಲ್ತ್ ಕೇರ್ನಲ್ಲಿ ಸಾರ್ವಜನಿಕರು ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ಮಾಹಿತಿಗೆ ಮೊ. 8453475775, 9483414449 ಹಾಗೂ 9513878265ರಲ್ಲಿ ಸಂಪರ್ಕಿಸಲು ಕೋರಲಾಗಿದೆ.