ಶಿವಮೊಗ್ಗ, ಮೇ.14
ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ಮಲೆನಾಡಿನಲ್ಲಿ ಕಳೆದ 25 ವರ್ಷಗಳಿಂದ ಉದ್ಯಮ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಜಿ. ಆರ್. ಎಂಟರ್ ಪ್ರೈಸಸ್ ಸಂಸ್ಥೆಯ ಪಾಲುದಾರರು ಇದೀಗ ಯಡಗೆರೆ ಎಂಟರ್ ಪ್ರೈಸಸ್ ಹೆಸರಿನ ಸಂಸ್ಥೆಯೊಂದನ್ನು ಹುಟ್ಟು ಹಾಕಿದ್ದು, ಇದರ ಮೂಲಕ ಗೃಹಪಯೋಗಿ ಉತ್ಪನ್ನಗಳ [Home Appliances Products] ಗಳ ತಯಾರಿಕೆಗೆ ಮುಂದಾಗಿದ್ದಾರೆ.
ಈ ಮೂಲಕ ಮಲೆನಾಡು ಕೇಂದ್ರವಾದ ಶಿವಮೊಗ್ಗದಲ್ಲಿ ಹೊಸ ಉದ್ಯಮ ಕ್ಷೇತ್ರವೊಂದು ತಲೆ ಎತ್ತಲಿದೆ. ಮೇ 15 ಬೆಳಿಗ್ಗೆ 11 ಗಂಟೆಗೆ ಈ ಉದ್ಯಮ ಸಾಗರ ರಸ್ತೆಯ ಬಿ ಎಸ್ ಎನ್ ಎಲ್ ಕಚೇರಿ ಬಳಿ ಶುಭಾರಂಭವಾಗಲಿದೆ.
ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಬಹುತೇಕ ಇಂತಹ ಪೂರ್ಣ ಪ್ರಮಾಣದಲ್ಲಿ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆಯ ಪ್ರಮುಖ ಉದ್ಯಮ ಸಂಸ್ಥೆಯಾಗಿ ಮೂಡಿ ಬರಲಿದೆ.
ಆರಂಭದಲ್ಲಿ ಮಲೆನಾಡು, ಕರಾವಳಿ ಮತ್ತು ಮಧ್ಯ ಕರ್ನಾಟಕದ ಎಂಟು ಜಿಲ್ಲೆಗಳನ್ನು ಕೇಂದ್ರೀಕರಿಸಿದ್ದು, ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಹಾಗೂ ಬೆಂಗಳೂರು, ಮೈಸೂರು ಭಾಗದಲ್ಲಿ ಮಾರುಕಟ್ಟೆ ವಿಸ್ತರಣೆಯಾಗಲಿದೆ.
ಮುಂದಿನ ಐದು ವರ್ಷಗಳಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಾವಿರಾರು ಉದ್ಯೋಗ ಸೃಷ್ಟಿ ಕೂಡ ಆಗಲಿದೆ ಎಂದು ಯಡಗೆರೆ ಎಂಟರ್ ಪ್ರೈಸಸ್ ಸಂಸ್ಥೆಯ ನಿರ್ದೇಶಕ ಗುರುದತ್ ಹೆಬ್ಬಾರ್ ತಿಳಿಸಿದ್ದಾರೆ.