ಶಿವಮೊಗ್ಗ: ಯುವ ಮುಖಂಡ ಮಂಜುನಾಥ ಡಿ (ಮಂಜು ಪುರಲೆ) ಅವರನ್ನು ಕಾಂಗ್ರೆಸ್ನ ಜವಾಹರ್ ಬಾಲ್ ಮಂಚ್ನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಮುಖ್ಯ ಸಂಚಾಲಕ ಮೈನುದ್ದೀನ್ ಹೆಚ್.ಜೆ ಆದೇಶಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿ ಸಂಘಟನೆ, ಎನ್ಎಸ್ಯುಐ, ಯುವ ಕಾಂಗ್ರೆಸ್ನಲ್ಲಿ ಸಲ್ಲಿಸಿದ ಸೇವೆ ಹಾಗೂ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗಾಗಿ ಶ್ರಮಿಸಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ಮಂಜು ಪುರಲೆ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.