ಶಿವಮೊಗ್ಗ ಮೇ 22\:ಶಿವಮೊಗ್ಗ ಎಂ.ಆರ್.ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ಮೇ 26 ರ ಬೆಳಿಗ್ಗೆ 9.30 ರಿಂದ ಸಂಜೆ 5.00 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್,

ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐ.ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ,

ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.