ಶಿವಮೊಗ್ಗ:
ಕರ್ನಾಟಕದ ಪ್ರತಿಭಾವಂತ ರಣಜಿ ಆಟಗಾರ ಹಾಗೂ ಅಂಡರ್-19 ತಂಡದ ಬೌಲಿಂಗ್ ಕೋಚ್ ಆಗಿದ್ದ ಎಸ್.ಎಲ್. ಅಕ್ಷಯ್ ಅವರು ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ಆಘಾತ ಮೂಡಿಸಿದೆ.


ಆಟಗಾರನಾಗಿ ಹಾಗೂ ಯುವ ಕ್ರಿಕೆಟ್ ಪ್ರತಿಭೆಗಳನ್ನು ರೂಪಿಸುವ ತರಬೇತುದಾರನಾಗಿ ಕರ್ನಾಟಕ ಕ್ರಿಕೆಟ್ಗೆ ಅವರು ನೀಡಿದ ಕೊಡುಗೆ ಸ್ಮರಣೀಯ. ಅವರ ನಿಧನದಿಂದ ರಾಜ್ಯವು ಒಬ್ಬ ಶ್ರೇಷ್ಠ ಕ್ರೀಡಾ ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ.


ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.