ಶಿವಮೊಗ್ಗ: ನಗರದ ಪ್ರತಿಭಾವಂತ ಕ್ರೀಡಾಪಟು ನೇಸರ ಎಲ್.ಸಿ., ಡಾ. ಲಾವಣ್ಯ ಚಂದ್ರಶೇಖರ್ ಅವರ ಪುತ್ರಿ, ಮೇ 19ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಪ್ರತಿಷ್ಠಿತ “Kudo National Champions Trophy” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಆಯೋಜಿಸಲಾದ ಈ ಕ್ರೀಡಾಕೂಟದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದು, ಕಠಿಣ ಸ್ಪರ್ಧೆಯನ್ನು ಎದುರಿಸಿದ ನೇಸರ ಎಲ್.ಸಿ. ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ರನ್ನರ್-ಅಪ್ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ಅವರ ಸಾಧನೆಗೆ ಕುಟುಂಬಸ್ಥರು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರುವಂತಾಗಲಿ ಎಂದು ಹಲವರು ಶುಭ ಹಾರೈಸಿದ್ದಾರೆ.