ಶಿವಮೊಗ್ಗ : ನಗರದ ಅಲ್ಲಮಪ್ರಭು ಮೈದಾನದಲ್ಲಿ ಸೂಡದಿಂದ ನಿರ್ಮಿಸಿದ ಫ್ರೀಡಂ ಪಾರ್ಕ್ನ ಓಪನ್ ಜಿಮ್ನ ಸಲಕರಣೆಗಳು ಕಳಚುತ್ತಿದ್ದು ಅಪಾಯ ಸ್ಥಿತಿಯಲ್ಲಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಇತ್ತೀಚೆಗಷ್ಟೇ ಲಕ್ಷಾಂತರ ರೂ.ವೆಚ್ಚದಲ್ಲಿ ಸೂಡಾದಿಂದ ಬಯಲು ಜಿಮ್ ಅನ್ನು ಉದ್ಘಾಟಿಸಲಾಗಿತ್ತು. ಜನರಿಂದಲೂ ಇದಕ್ಕೆ ಒಳ್ಳೆಯ ಸ್ಪಂದನೆ ಸಿಕ್ಕಿತ್ತು. ಆದರೆ ಸರಿಯಾಗಿ ಕ್ಯೂರಿಂಗ್ ಆಗಿದೆ ಇರುವುದರಿಂದ ಅಳವಡಿಸಿದ ವ್ಯಾಯಾಮ ಸಲಕರಣೆಗಳು ಅಲುಗಾಡುತ್ತಿದ್ದು ಅಪಾಯಕ್ಕೆ ಕಾರಣವಾಗಿದೆ. ಮಕ್ಕಳು, ವೃದ್ಧರು ಸೇರಿದಂತೆ ಸಾರ್ವಜನಿಕರು ಪ್ರತಿನಿತ್ಯ ಈ ಓಪನ್ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿರುತ್ತಾರೆ. ಆದರೆ ಕಳಪೆ ಕಾಮಗಾರಿಯಿಂದಾಗಿ ಮತ್ತು ಅಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಕಣ್ಗಾವಲು ಇಲ್ಲದೇ ಇರುವುದರಿಂದ ಈ ಸಲಕರಣೆಗಳು ಈಗಲೇ ದುಸ್ಥಿತಿಗೆ ತಲುಪಿದೆ. ಆದ್ದರಿಂದ ಇಲ್ಲಿ ಸಿಸಿ ಕ್ಯಾಮೇರಾ ಮತ್ತು ಭದ್ರತಾ ಸಿಬ್ಬಂದಿಯನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.