
ಬೆಂಗಳೂರು,ಮೇ.31:
ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಈಗ ಪ್ರತಿಪಕ್ಷದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ.
ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡಲು ಮುಂದಾಗಿದ್ದು, ಈ ಬಾರಿ ಮಹಿಳೆಯೊಬ್ಬರಿಗೆ ಪಕ್ಷದ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಖ್ಯಾತ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ.



ಬಿವೈ ವಿಜಯೇಂದ್ರ ಅವರ ಪದತ್ಯಾಗವಾಗಲಿದೆ. ಅವರ ಸ್ಥಾನಕ್ಕೆ ಮಹಿಳಾ ನಾಯಕಿ ಬರಲಿದ್ದಾರೆ ಎಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಶಾಂತ್ ಕಿಣಿ, “ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಕೆಳಗಿಳಿಯಲಿದ್ದಾರೆ. ಅವರ ಸ್ಥಾನಕ್ಕೆ ಒಬ್ಬ ಮಹಿಳೆ ನೇಮಕವಾಗಲಿದ್ದಾರೆ! ” ಎಂದು ಬರೆದುಕೊಂಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. “ಒಬ್ಬ ಮಹಿಳೆ ಕರ್ನಾಟಕ ಬಿಜೆಪಿಯ ಚುಕ್ಕಾಣಿ ಹಿಡಿಯಲಿದ್ದಾರೆ” ಎಂಬುದು ಅವರ ಭವಿಷ್ಯದ ಸಾರಾಂಶ. (ಕನ್ನಡಪ್ರಭ)
