ಇದನ್ನೂ ಓದಿ
ಶಿವಮೊಗ್ಗ : ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಕಾರ್ಯಾಚರಣೆ | ಜೆಸಿಬಿ ಟ್ಯಾಕ್ಟರ್ ಲಾರಿ ಸೇರಿದಂತೆ 50 ಕ್ಕೂ ಹೆಚ್ಚು ವಾಹನಗಳು ವಶ https://tungataranga.com/?p=51456
ಸಂಪೂರ್ಣ ಸುದ್ದಿ ಓದಲು ಆಯಾ ಲಿಂಕ್ ಬಳಸಿ
ಗಮನಿಸಿ ಕಿರಿಕಿರಿ ಇಲ್ಲದ ಸುದ್ದಿವಾಹಿನಿಯ ತುಂಗಾತರಂಗ ಗುಂಪಲ್ಲಿ ಇಲ್ಲದವರು ಮಾತ್ರ ಕೆಳಗಿನ ಲಿಂಕಲ್ಲಿ ಸೇರಿ
https://chat.whatsapp.com/6YztXPcuKCNIaR4rnaWc4w?mode=hqrt1
ತೀರ್ಥಹಳ್ಳಿ,ಮೇ.31: ಮಂಡಗದ್ದೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಥಳದಿಂದ 1,888.25 ಕೆ.ಜಿ ತೂಕದ ಅಕ್ಕಿ ಹಾಗೂ ಡಿಜಿಟಲ್ ತೂಕದ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.

ಕಂದಾಯ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿ ಸೈಯದ್ ಗೌಸ್ ವಿರುದ್ಧ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಓಮ್ನಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಹಶೀಲ್ದಾರ್ ಎಸ್.ರಜಿತ್ ಸೂಚನೆಯ ಮೇರೆಗೆ ಆಹಾರ ಇಲಾಖೆಯ ಶಿರಸ್ತೇದಾರ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ವ್ಯಾನಿಟಿಬ್ಯಾಗ್ ಕಟ್- ಮತ್ತಿನ ಸರ ಮಾಯ!
ತೀರ್ಥಹಳ್ಳಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ಕತ್ತರಿಸಿ ಸುಮಾರು ₹2 ಲಕ್ಷ ಮೌಲ್ಯದ ಚಿನ್ನದ ಮುತ್ತಿನ ಸರವನ್ನು ಕಳವು ಮಾಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೈಮರ ಜಂಕ್ಷನ್ ಬಳಿ ನಡೆದಿದೆ.

ಕಟಗಾರು ಗ್ರಾಮದ ಪ್ರೇಮಾ ಭೋಜರಾಜ್ ಸರವನ್ನು ಕಳೆದುಕೊಂಡ ಮಹಿಳೆಯಾಗಿದ್ದಾರೆ.
ತೀರ್ಥಹಳ್ಳಿ ಬಸ್ ನಿಲ್ದಾಣದಿಂದ ಮೂಡಬಿದಿರೆಯಲ್ಲಿರುವ ತಮ್ಮ ತವರು ಮನೆಗೆ ತೆರಳಲು ಅವರು ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಬಸ್ನಲ್ಲಿ ಆಸನ ಲಭ್ಯವಿಲ್ಲದ ಕಾರಣ ನಿಂತುಕೊಂಡೇ ಪ್ರಯಾಣಿಸುತ್ತಿದ್ದ ವೇಳೆ, ಇಬ್ಬರು ಅಪರಿಚಿತ ಮಹಿಳೆಯರು ತಮ್ಮ ಪಕ್ಕದಲ್ಲಿ ಜಾಗ ನೀಡಿ ಕೂರಿಸಿಕೊಂಡಿದ್ದರು ಎನ್ನಲಾಗಿದೆ.
ಸ್ವಲ್ಪ ಸಮಯದ ಬಳಿಕ ಆ ಮಹಿಳೆಯರು, “ನಿಮ್ಮ ಕುತ್ತಿಗೆಯಲ್ಲಿರುವ ಸರ ತುಂಡಾಗಿದೆ, ಅದನ್ನು ಬ್ಯಾಗ್ನಲ್ಲಿ ಇಟ್ಟುಕೊಳ್ಳಿ” ಎಂದು ಸಲಹೆ ನೀಡಿದ್ದರು. ಅದರಂತೆ ಪ್ರೇಮಾ ಅವರು 56 ಗ್ರಾಂ ತೂಕದ ಲಕ್ಷ್ಮೀ ಪೆಂಡೆಂಟ್ ಹೊಂದಿದ್ದ ಚಿನ್ನದ ಮುತ್ತಿನ ಸರವನ್ನು ಕುತ್ತಿಗೆಯಿಂದ ತೆಗೆದು ವ್ಯಾನಿಟಿ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು.

ಬಳಿಕ ಪ್ರಯಾಣದ ವೇಳೆ ನಿದ್ರೆಗೆ ಜಾರಿದ್ದ ಅವರು, ಬಸ್ ಕೈಮರ ಜಂಕ್ಷನ್ ತಲುಪಿದಾಗ ಎಚ್ಚರಗೊಂಡಿದ್ದಾರೆ. ಆಗ ವ್ಯಾನಿಟಿ ಬ್ಯಾಗ್ನ ಒಂದು ಬದಿಯನ್ನು ಕತ್ತರಿಸಿ, ಜಿಪ್ ತೆರೆಯುವ ಮೂಲಕ ಒಳಗಿದ್ದ ಚಿನ್ನದ ಸರವನ್ನು ಕಳ್ಳರು ಎಗರಿಸಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಪ್ರೇಮಾ ಭೋಜರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.